ಯೆಶಾಯ 37:27 - ಪರಿಶುದ್ದ ಬೈಬಲ್27 ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ. ಅಧ್ಯಾಯವನ್ನು ನೋಡಿ |