Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:3 - ಪರಿಶುದ್ದ ಬೈಬಲ್‌

3 ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:3
20 ತಿಳಿವುಗಳ ಹೋಲಿಕೆ  

ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


“ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಆ ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು.


ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು