30 ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.
30 ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
30 ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.
30 “ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.
“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.
ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.
ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.
ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.