Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:31 - ಪರಿಶುದ್ದ ಬೈಬಲ್‌

31 “ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತಪ್ಪಿಸಿಕೊಂಡುಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:31
18 ತಿಳಿವುಗಳ ಹೋಲಿಕೆ  

ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು