Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:33 - ಪರಿಶುದ್ದ ಬೈಬಲ್‌

33 ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು - ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:33
11 ತಿಳಿವುಗಳ ಹೋಲಿಕೆ  

“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು