38 ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.
38 ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
38 ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.
38 ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.
38 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.
“ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.
“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!
ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.
ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.
ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.
ನನ್ನ ಪೂರ್ವಿಕರು ಆ ದೇಶಗಳನ್ನು ನಾಶಮಾಡಿದರು. ಯಾವ ದೇವರೂ ತನ್ನ ಜನರನ್ನು ನಾನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಿಲ್ಲ. ನಿಮ್ಮ ದೇವರು ನನ್ನಿಂದ ನಿಮ್ಮನ್ನು ಕಾಪಾಡುವನು ಎಂದು ನೀವು ನೆನಸುತ್ತೀರೋ?
ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’” ಎಂದು ಹೇಳಿದನು.