ಯೆಶಾಯ 38:10 - ಪರಿಶುದ್ದ ಬೈಬಲ್10 ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 [ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.