Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:2 - ಪರಿಶುದ್ದ ಬೈಬಲ್‌

2 ಹಿಜ್ಕೀಯನು ದೇವಾಲಯದ ಕಡೆಗಿರುವ ಗೋಡೆಯ ಕಡೆಗೆ ಮುಖ ಮಾಡಿ ದೇವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:2
6 ತಿಳಿವುಗಳ ಹೋಲಿಕೆ  

ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು