Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:2 - ಪರಿಶುದ್ದ ಬೈಬಲ್‌

2 ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧ ದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧ ಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:2
18 ತಿಳಿವುಗಳ ಹೋಲಿಕೆ  

ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.


ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.


ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.


ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.


ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.


ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.


ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.


ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.


ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು