ಯೆಶಾಯ 39:3 - ಪರಿಶುದ್ದ ಬೈಬಲ್3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”