ಯೆಶಾಯ 4:4 - ಪರಿಶುದ್ದ ಬೈಬಲ್4 ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”