Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:11 - ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:11
32 ತಿಳಿವುಗಳ ಹೋಲಿಕೆ  

ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


“ನೀವು ನನ್ನ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡುಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆಮಾಡಿ ಸತ್ಯವನ್ನು ಕಂಡುಕೊಳ್ಳುವನು.


ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


“ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು