ಯೆಶಾಯ 40:15 - ಪರಿಶುದ್ದ ಬೈಬಲ್15 ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದುದುರುವ ತುಂತುರಿನಂತೆಯೂ ತ್ರಾಸಿನ ತಟ್ಟೆಯ ದೂಳಿನ ಹಾಗೂ ಇರುತ್ತವೆ; ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.