Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:17 - ಪರಿಶುದ್ದ ಬೈಬಲ್‌

17 ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:17
8 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್‌ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”


ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು