Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:22 - ಪರಿಶುದ್ದ ಬೈಬಲ್‌

22 ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:22
28 ತಿಳಿವುಗಳ ಹೋಲಿಕೆ  

ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.


ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.


ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!


ದಟ್ಟವಾದ ಮೋಡಗಳು ಆತನನ್ನು ಮುಚ್ಚಿಕೊಂಡಿವೆ. ಆಕಾಶದ ಮೇಲ್ಗಡೆಯಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ.


ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.


ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.


ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?


ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.


ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.


ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.


“ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.


ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು. ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದೆ ತೂಗುಹಾಕಿದ್ದಾನೆ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು