Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:26 - ಪರಿಶುದ್ದ ಬೈಬಲ್‌

26 ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:26
26 ತಿಳಿವುಗಳ ಹೋಲಿಕೆ  

ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.


ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!


ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು