ಯೆಶಾಯ 40:31 - ಪರಿಶುದ್ದ ಬೈಬಲ್31 ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.