ಯೆಶಾಯ 40:7 - ಪರಿಶುದ್ದ ಬೈಬಲ್7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.