ಯೆಶಾಯ 41:1 - ಪರಿಶುದ್ದ ಬೈಬಲ್1 ಯೆಹೋವನು ಹೇಳುವುದೇನೆಂದರೆ: “ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ. ಅಧ್ಯಾಯವನ್ನು ನೋಡಿ |