Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:11 - ಪರಿಶುದ್ದ ಬೈಬಲ್‌

11 ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:11
25 ತಿಳಿವುಗಳ ಹೋಲಿಕೆ  

ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.


“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”


ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.


ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್‌ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.


ಅದರ ನಾಯಕರೂ ಸ್ವತಂತ್ರರೂ ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.


ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.


ಯಾವ ಜನಾಂಗವಾದರೂ ನನ್ನ ಸಂದೇಶವನ್ನು ಕೇಳದೆಹೋದರೆ ಅದನ್ನು ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನ್ನು ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಬಂದ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು