Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:12 - ಪರಿಶುದ್ದ ಬೈಬಲ್‌

12 ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:12
7 ತಿಳಿವುಗಳ ಹೋಲಿಕೆ  

ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಅದರ ನಾಯಕರೂ ಸ್ವತಂತ್ರರೂ ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು.


ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ.


ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು