ಯೆಶಾಯ 41:14 - ಪರಿಶುದ್ದ ಬೈಬಲ್14 ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ! ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.