Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:15 - ಪರಿಶುದ್ದ ಬೈಬಲ್‌

15 ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:15
20 ತಿಳಿವುಗಳ ಹೋಲಿಕೆ  

“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ. ಮತ್ತು ಜನಾಂಗಗಳನ್ನು ಶಿಕ್ಷಿಸಿದೆ.


ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.


ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.


ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.


ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.


ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.


ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದ್ದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.


ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು