ಯೆಶಾಯ 41:16 - ಪರಿಶುದ್ದ ಬೈಬಲ್16 ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.