ಯೆಶಾಯ 41:19 - ಪರಿಶುದ್ದ ಬೈಬಲ್19 ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೇವದಾರು ಕಸ್ತೂರಿಜಾಲಿ ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ ತಿಲಕ ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.