22 ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು.
22 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.
22 ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು.
22 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು; ಅಥವಾ ಭವಿಷ್ಯತ್ತುಗಳನ್ನು ಅರುಹಿರಿ.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
“ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.
“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.
ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.
“ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.
ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.