ಯೆಶಾಯ 41:23 - ಪರಿಶುದ್ದ ಬೈಬಲ್23 ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. ಅಧ್ಯಾಯವನ್ನು ನೋಡಿ |
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು.