Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:25 - ಪರಿಶುದ್ದ ಬೈಬಲ್‌

25 “ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:25
15 ತಿಳಿವುಗಳ ಹೋಲಿಕೆ  

ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು