Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:26 - ಪರಿಶುದ್ದ ಬೈಬಲ್‌

26 “ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕಾರ್ಯವು ನಡೆಯುವದಕ್ಕೆ ಮುಂಚೆ [ಇವರಲ್ಲಿ] ಯಾವನು ಅದನ್ನು ಅರುಹಿದ್ದಾನೆ? ಅರುಹಿದ್ದರೆ [ಅವನು ನಿಜ ದೇವರೆಂದು] ನಮಗೆ ಗೊತ್ತಾಗುವದು; ಯಾವನು ಮುಂತಿಳಿಸಿದ್ದಾನೆ? ತಿಳಿಸಿದ್ದರೆ ಅವನನ್ನು ಸತ್ಯವಂತನೆನ್ನುವೆವು. ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ, ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸುವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:26
7 ತಿಳಿವುಗಳ ಹೋಲಿಕೆ  

ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.


ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು