Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:27 - ಪರಿಶುದ್ದ ಬೈಬಲ್‌

27 ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ ನೋಡು ಎನ್ನುವ ಮುಂದೂತನನ್ನು ಚೀಯೋನಿಗೆ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ, ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:27
14 ತಿಳಿವುಗಳ ಹೋಲಿಕೆ  

ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು