Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:28 - ಪರಿಶುದ್ದ ಬೈಬಲ್‌

28 ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ. ನಾನು ಅವರನ್ನು ಕೇಳುವ ಪ್ರಶ್ನೆಗೆ, ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:28
9 ತಿಳಿವುಗಳ ಹೋಲಿಕೆ  

ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.


ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು