Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:3 - ಪರಿಶುದ್ದ ಬೈಬಲ್‌

3 ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ. ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಅವರನ್ನು ಹಿಂದಟ್ಟುತ್ತಾ ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದುಹೋಗುವಂತೆ ಗೈದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಾನು ಎಂದೂ ಹೆಜ್ಜೆ ಇಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದಟ್ಟುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:3
4 ತಿಳಿವುಗಳ ಹೋಲಿಕೆ  

ಆದರೆ ಶಾಂತಿಸಮಾಧಾನಗಳು ಬರುತ್ತವೆ. ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು.


ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದುಹೋಗಿರುವುದಿಲ್ಲ.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು