ಯೆಶಾಯ 41:6 - ಪರಿಶುದ್ದ ಬೈಬಲ್6 “ಕೆಲಸಗಾರರು ಒಬ್ಬರಿಗೊಬ್ಬರು ಸಹಾಯ ಮಾಡುವರು. ಅವರು ಬಲಶಾಲಿಗಳಾಗಬೇಕೆಂದು ಪರಸ್ಪರ ಪ್ರೋತ್ಸಾಹಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಬ್ಬರಿಗೊಬ್ಬರು ಸಹಾಯಮಾಡಿದರು, ಒಬ್ಬನಿಗೊಬ್ಬನು ಧೈರ್ಯವಾಗಿರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯ ಮಾಡಲಿ. ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರಿ!” ಎಂದು ಹೇಳಲಿ. ಅಧ್ಯಾಯವನ್ನು ನೋಡಿ |
ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”