Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:9 - ಪರಿಶುದ್ದ ಬೈಬಲ್‌

9 ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:9
23 ತಿಳಿವುಗಳ ಹೋಲಿಕೆ  

“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಜನರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣದಿಕ್ಕುಗಳಿಂದ ಬರುವರು. ಅವರು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


“ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು.


ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು