Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:10 - ಪರಿಶುದ್ದ ಬೈಬಲ್‌

10 ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:10
32 ತಿಳಿವುಗಳ ಹೋಲಿಕೆ  

ಆತನಿಗೆ ಹೊಸ ಹಾಡನ್ನು ಹಾಡಿರಿ! ಹಾರ್ಪ್‌ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!


ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.


ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಗಳನ್ನೂ ಸವಾರರನ್ನೂ ಸಮುದ್ರದೊಳಗೆ ಮುಳುಗಿಸಿದನು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು