Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:11 - ಪರಿಶುದ್ದ ಬೈಬಲ್‌

11 ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:11
21 ತಿಳಿವುಗಳ ಹೋಲಿಕೆ  

ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.


ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.


ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.


ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.


ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.


ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.


“ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.


ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು