ಯೆಶಾಯ 42:13 - ಪರಿಶುದ್ದ ಬೈಬಲ್13 ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.