Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:16 - ಪರಿಶುದ್ದ ಬೈಬಲ್‌

16 ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:16
40 ತಿಳಿವುಗಳ ಹೋಲಿಕೆ  

ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.


ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ಜನರು ಸಹಾಯಕ್ಕಾಗಿ ರಾಜನ ಕಡೆಗೆ ನೋಡುವರು. ಅವನು ಹೇಳಿದ್ದನ್ನು ಅವರು ಕೇಳುವರು.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.


ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.


ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.


ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.


“ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.


“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.


ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”


ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.


ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ. ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು.


ದೇವರ ಕಾರ್ಯಗಳನ್ನು ನೋಡು. ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡಲು ಯಾರಿಗೆ ಸಾಧ್ಯ?


ವಕ್ರವಾದದ್ದನ್ನು ನೆಟ್ಟಗೆ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದಕ್ಕೂ ಸಾಧ್ಯವಿಲ್ಲ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು