ಯೆಶಾಯ 42:19 - ಪರಿಶುದ್ದ ಬೈಬಲ್19 ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧಕರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಸೇವಕನಲ್ಲದೆ ಕುರುಡನು ಯಾರು? ನಾನು ಕಳುಹಿಸಿದ ಸೇವಕನಲ್ಲದೆ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಯೆಹೋವ ದೇವರ ಸೇವಕನಂತೆ ಕುರುಡನು ಯಾರು? ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.