Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:20 - ಪರಿಶುದ್ದ ಬೈಬಲ್‌

20 ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:20
20 ತಿಳಿವುಗಳ ಹೋಲಿಕೆ  

ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.


ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’


“‘ನೀನು ಅವರಿಗೆ ಏನೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು