ಯೆಶಾಯ 42:22 - ಪರಿಶುದ್ದ ಬೈಬಲ್22 ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿ |
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.
ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.