Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:24 - ಪರಿಶುದ್ದ ಬೈಬಲ್‌

24 ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾವನಿಗೆ ವಿರುದ್ಧವಾಗಿ ನಾವು ದ್ರೋಹ ಮಾಡಿದೆವೋ ಆ ಯೆಹೋವನಲ್ಲವೇ. ಆತನ ಜನರು ಆತನ ಮಾರ್ಗಗಳಲ್ಲಿ ನಡೆಯಲೊಲ್ಲದೆ ಆತನ ಉಪದೇಶವನ್ನು ಕೇಳದೆ ಹೋದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:24
29 ತಿಳಿವುಗಳ ಹೋಲಿಕೆ  

ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.


ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ,


ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು