Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:25 - ಪರಿಶುದ್ದ ಬೈಬಲ್‌

25 ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:25
26 ತಿಳಿವುಗಳ ಹೋಲಿಕೆ  

ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು