ಯೆಶಾಯ 42:4 - ಪರಿಶುದ್ದ ಬೈಬಲ್4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.” ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.