ಯೆಶಾಯ 42:6 - ಪರಿಶುದ್ದ ಬೈಬಲ್6 “ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6-7 “ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.