Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:9 - ಪರಿಶುದ್ದ ಬೈಬಲ್‌

9 ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:9
16 ತಿಳಿವುಗಳ ಹೋಲಿಕೆ  

ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.


ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.


ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


“ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.


ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು