ಯೆಶಾಯ 43:14 - ಪರಿಶುದ್ದ ಬೈಬಲ್14 ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು. ಅಧ್ಯಾಯವನ್ನು ನೋಡಿ |
ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.