Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:19 - ಪರಿಶುದ್ದ ಬೈಬಲ್‌

19 ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:19
26 ತಿಳಿವುಗಳ ಹೋಲಿಕೆ  

“ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.


ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.


ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.


ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.


ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.


ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.


ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು