ಯೆಶಾಯ 43:21 - ಪರಿಶುದ್ದ ಬೈಬಲ್21 ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”