Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:24 - ಪರಿಶುದ್ದ ಬೈಬಲ್‌

24 ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದೆ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:24
18 ತಿಳಿವುಗಳ ಹೋಲಿಕೆ  

ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.


ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.


“ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು